ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರಿನ ವೀವರ್ಸ್ ಕಾಲೊನಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (32), ನಾಜಿಯಾ (22), ಇರ್ಫಾನ್ (21), ಗುಲಾಬ್ (18) ಹಾಗು ಶಹಜಾದ್ (9) ಗಾಯಾಳುಗಳು.
ಮನೆಯಲ್ಲಿ ಸಿಲಿಂಡರ್ ಅನಿಲ ಸೋರಿಕೆಯಾಗಿದ್ದು, ಇದರ ಬಗ್ಗೆ ತಿಳಿಯದೇ ಇಂದು ಬೆಳಗ್ಗೆ 5:30ಕ್ಕೆ ಮನೆಯ ವಿದ್ಯುತ್ ಬಲ್ಬ್ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.