ರಜೌರಿಯಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಪ್ರಾಂತ್ಯದ ರಜೌರಿ ಜಿಲ್ಲೆಯ ಬಾಜಿ ಕಲಾಕೋಟ್‌ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಉಗ್ರರು ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಓರ್ವ ಭದ್ರತಾಧಿಕಾರಿ ಹುತಾತ್ಮರಾಗಿದ್ದಾರೆ ಎನ್ನಲಾಗ್ತಿದೆ. ಆದರೇ ಈ ಕುರಿತು ಪೊಲೀಸರು ಅಥವಾ ಸೇನಾ ಅಧಿಕಾರಿಗಳು ಖಚಿತಪಡಿಸಿಲ್ಲ.

ಇದಕ್ಕೂ ಮುನ್ನ ಬಾಜಿ ಬಾಲಕೋಟ್​ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಮತ್ತು ಜಮ್ಮು ಪೊಲೀಸರು ಆ ಪ್ರದೇಶವನ್ನು ಸುತ್ತುವರಿದು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು, ಜಂಟಿ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಮತ್ತು ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!