ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಸೆಲೆಬ್ರಿಟಿಗಳ ಡೀಪ್ ಫೇಕ್ ವಿಡಿಯೋಗಳು ವೈರಲ್ ಆಗುತ್ತಿರುವುದು,ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ಇದರ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅವರ ಡೀಪ್ಫೇಕ್ ವೀಡಿಯೊಗಳು ವೈರಲ್ ಆಗಿದ್ದು, ಕೆಲವರು ಅವರ ಹೆಸರಿನಲ್ಲಿ ‘ಎಕ್ಸ್’ (ಟ್ವಿಟರ್) ನಲ್ಲಿ ನಕಲಿ ಖಾತೆಗಳನ್ನು ತೆರೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಾತನಾಡಿದ ಅವರು, ‘ನಮ್ಮ ದೈನಂದಿನ ಚಟುವಟಿಕೆ, ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಾಮಾಜಿಕ ಮಾಧ್ಯಮವು ಒಂದು ಅದ್ಭುತ ವೇದಿಕೆಯಾಗಿದೆ. ಆದರೆ, ಕೆಲವರು ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಬೇಸರ ತಂದಿದೆ. ನನ್ನ ಡೀಪ್ಫೇಕ್ ಫೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿರುವುದನ್ನು ನಾನು ನೋಡಿದ್ದೇನೆ. ಅಲ್ಲದೆ, ‘X’ನಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ನನ್ನ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ನೆಟಿಜನ್ಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ನಾನು ‘X'(ಎಕ್ಸ್) ನೊಂದಿಗೆ ಮೂಲ ಖಾತೆಯನ್ನು ಹೊಂದಿಲ್ಲ. ‘X'(ಎಕ್ಸ್) ಅಂತಹ ನಕಲಿ ಖಾತೆಗಳನ್ನು ಗುರುತಿಸಿ ಅಮಾನತುಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಪೋಸ್ಟ್ನಲ್ಲಿ ಬರೆದಿದ್ದಾರೆ.
ಇತ್ತೀಚೆಗೆ ಟೀಂ ಇಂಡಿಯಾ ಕ್ರಿಕೆಟಿಗ ಶುಭಮನ್ ಗಿಲ್ ಜೊತೆ ಸಾರಾ ತೆಂಡೂಲ್ಕರ್ ಇರುವ ಮಾರ್ಫಿಂಗ್ ಫೋಟೋ ವೈರಲ್ ಆಗಿತ್ತು. ಸಾರಾ ಅವರ ಸಹೋದರ ಅರ್ಜುನ್ ಫೋಟೋವನ್ನು ಡೀಪ್ಫೇಕ್ ಮಾಡಿದ್ದಾರೆ. ಅರ್ಜುನ್ ಮುಖವನ್ನು ಗಿಲ್ ಅವರ ಫೋಟೋದಿಂದ ಬದಲಾಯಿಸಲಾಗಿದೆ ಮತ್ತು ಅದು ವೈರಲ್ ಆಗಿದೆ ಎನ್ನಲಾಗುತ್ತಿದೆ.