ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಕ್ಯಾಪ್ಟನ್‌ಗಳು, ಹವಾಲ್ದಾರ್ ಮತ್ತು ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಸೇನೆಯ ಮೇಜರ್ ಮತ್ತು ಯೋಧರೊಬ್ಬರು ಗಾಯಗೊಂಡಿದ್ದು ಅವರನ್ನು ಉಧಂಪುರದ ಸೇನಾ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಬಾಜಿಮಾಲ್‌ನ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಆ ಪ್ರದೇಶದಲ್ಲಿ ಅವಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ . ಇಬ್ಬರು ಉಗ್ರರು ಅರಣ್ಯದಲ್ಲಿ ಅವಿತಿರುವ ಸಾಧ್ಯತೆ ಇದ್ದು, ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ವಿವರಿಸಿವೆ.