ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೀಪ್‌ಫೇಕ್ ತಂತ್ರಜ್ಞಾನದಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅಧ್ಯಕ್ಷತೆಯಲ್ಲಿಂದು ಉನ್ನತ ಮಟ್ಟದ ಸಭೆ ನಡೆದಿದೆ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳು, ನಾಸ್ಕಾಮ್ (NASSCOM), ಮತ್ತು ಕೃತಕ ಬುದ್ಧಿಮತ್ತೆ (AI) ನಲ್ಲಿ ಕೆಲಸ ಮಾಡುವ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಸಭೆ ಬಳಿಕ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಸೆಲೆಬ್ರಿಟಿಗಳಿಂದ ಹಿಡಿದು ಸಾಮಾನ್ಯ ಜನರಿಗೆ ಕಿರುಕುಳ ಕೊಡುವ ಯಾರೇ ಆದರೂ ಮುಲಾಜಿಲ್ಲದೆ ಕಾನೂನಿನ ಶಿಕ್ಷೆಗೆ ಒಳಗಾಗುತ್ತಾರೆಂದು ಖಡಕ್ ಎಚ್ಚರಿಕೆ ಕೊಟ್ಟರು.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು
- ನಾಲ್ಕು ಅಂಶಗಳ ಮೇಲೆ ಗಮನಹರಿಸಿದ ಕೇಂದ್ರ- ಪತ್ತೆಹಚ್ಚುವಿಕೆ, ತಡೆಗಟ್ಟುವಿಕೆ, ಆಳವಾದ ನಕಲಿ ವರದಿ ಮಾಡುವ ಕಾರ್ಯವಿಧಾನ ಮತ್ತು ಜನರಲ್ಲಿ ಜಾಗೃತಿಯನ್ನು ಹೆಚ್ಚಿಸಬೇಕಿದೆ ಎಂದರು.
- ಈ ನಾಲ್ಕು ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳುವ ಅಂಶಗಳನ್ನು 10 ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.
- ನಕಲಿ ವಿಷಯವನ್ನು ಸೃಷ್ಟಿಸುವ, ಅಪ್‌ಲೋಡ್ ಮಾಡುವ ಮತ್ತು ಶೇರ್ ಮಾಡುವ ವ್ಯಕ್ತಿಗಳ ಶಿಕ್ಷೆಗೆ ಗುರಿಯಾಗುತ್ತಾರೆ ಜೊತೆಗೆ ದಂಡ ವಿಧಿಸುವ ಎಚ್ಚರಿಕೆ ಕೊಟ್ಟರು.
- ಇದಕ್ಕೆ ಸಂಬಂಧಿಸಿದಂತೆ ಮುಂಬರುವ ದಿನಗಳಲ್ಲಿ ಈಗ ಅಸ್ತಿತ್ವದಲ್ಲಿರುವ ನಿಯಮಗಳನ್ನು ತಿದ್ದುಪಡಿ ಮಾಡುವ ಅಥವಾ ಹೊಸ ಕಾನೂನನ್ನು ತರುವ ಯೋಚನೆ
- ಈ ಪ್ರಕರಣಗಳು ನಿಜವಾಗಿಯೂ ಸಮಾಜಕ್ಕೆ ಹಾನಿಕಾರಕವಾಗಿದ್ದು, ಹೆಚ್ಚು ನಿಯಂತ್ರಣದ ಅಗತ್ಯವಿದೆ ಎಂದರು.
- ಇಂದು ತೆಗೆದುಕೊಂಡ ನಿರ್ಧಾರಗಳನ್ನು ಅನುಸರಿಸಲು ಡಿಸೆಂಬರ್ ಮೊದಲ ವಾರದಲ್ಲಿ ಮುಂದಿನ ಸಭೆ ನಡೆಸಲು ತೀರ್ಮಾನ.