ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ- ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ಬಾಗಲಕೋಟೆ:

ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಗ್ರಾಮೀಣ ಮಕ್ಕಳೂ ಕೆಎಎಸ್-ಪಿಎಸ್‌ಐ ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ ಎಂದರು.

ಈಗ 200 ಅಭ್ಯರ್ಥಿಗಳಿಂದ ಆರಂಭವಾಗಿ 1500 ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ವೀಣಾ ಕಾಶಪ್ಪನವರ್ ಫೌಂಡೇಷನ್ ನೆರಳಾಗಲಿದೆ ಎಂದು ಭವಿಷ್ಯ ನುಡಿದರು.

ಸಾವಿರಾರು ವಿದ್ಯಾರ್ಥಿಗಳ IAS-KAS ಕನಸನ್ನು, ಅವಕಾಶ ವಂಚಿತ ವಿದ್ಯಾರ್ಥಿಗಳ PSI-IPS ಆಗುವ ಕನಸನ್ನು ನನಸು ಮಾಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸದಲ್ಲಿ ಕಾಶಪ್ಪನವರ್ ದಂಪತಿ ತೊಡಗಿದ್ದಾರೆ. ಇವರಿಗೆ ನಿಮ್ಮ ಆಶೀರ್ವಾದ ಇರಲಿ ಎಂದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯಾಗಿ ಜಿಲ್ಲೆ ನೆನಪಿಡುವ ಕೆಲಸಗಳನ್ನು ವೀಣಾ ಮಾಡಿದ್ದಾರೆ. ಇವರ ಸಮಾಜಮುಖಿ ಕೆಲಸಗಳು ಈ ಕೆಎಎಸ್ ಅಕಾಡೆಮಿ ಮೂಲಕ ಇನ್ನಷ್ಟು ವಿಸ್ತಾರವಾಗುತ್ತಿದೆ ಎಂದು ವಿವರಿಸಿದರು. ಪ್ರತಿಭೆ ಪ್ರತಿಯೊಬ್ಬರಲ್ಲೂ ಇರುತ್ತದೆ, ಈ ಪ್ರತಿಭೆಗೆ ಅವಕಾಶಗಳು ಬೇಕು. ಆ ಅವಕಾಶವನ್ನು ಸೃಷ್ಟಿಸುವ ಕೆಲಸವನ್ನು ವೀಣಾ ಕಾಶಪ್ಪ ದಂಪತಿ ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!