ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಲ್ಲಿ ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ನೀಡಲಾದ ವಿಧಾನಸೌಧ ಕಚೇರಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. ಸೋಮಣ್ಣ ಕೂಡ ಒಳ್ಳೆಯ ಸಂಘಟಕ. ಮುಂದಿನ ದಿನಗಳಲ್ಲಿ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದರು.
ಆರ್. ಅಶೋಕ್ ಅವರನ್ನು ಪ್ರತಿಪಕ್ಷ ನಾಯಕ, ವಿಜಯೇಂದ್ರನನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಮಾಜಿ ಸಿಎಂ ಬೊಮ್ಮಾಯಿ ಎಲ್ಲರೂ ಸೇರಿ ಪಕ್ಷವನ್ನು ಮುನ್ನಡೆಸುತ್ತೇವೆ. ಇಂದು ಚುನಾವಣೆ ನಡೆದರು ನಾವು ಗೆಲ್ಲುತ್ತೇವೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.