ಸಲಿಂಗ ವಿವಾಹದ ಕುರಿತು ಆದೇಶ: ಅರ್ಜಿ ಮರುಪರಿಶೀಲನೆಗೆ ಸುಪ್ರೀಂ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಲಿಂಗ ವಿವಾಹ (Same Sex Marriage) ಕುರಿತು ಸುಪ್ರೀಂ ಕೋರ್ಟ್‌ನ (Supreme Court) ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ.28ರಂದು ನಡೆಸಲಿದೆ.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದರು.ಅರ್ಜಿಯ ಬಗ್ಗೆ ಮುಕ್ತ ನ್ಯಾಯಾಲಯದ ವಿಚಾರಣೆ ನಡೆಯಲಿ ಎಂದು ಮುಕುಲ್ ರೋಹಟಗಿ ಒತ್ತಾಯಿಸಿದರು.

ಕ್ವೀರ್ ದಂಪತಿಗಳ ವಿಚಾರದಲ್ಲಿ ತಾರತಮ್ಯವಿದೆ ಎಂದು ಎಲ್ಲಾ ನ್ಯಾಯಾಧೀಶರು ಒಪ್ಪಿಕೊಂಡಿದ್ದಾರೆ ಎಂಬುದನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದರು. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಿರ್ಧರಿಸಿದಂತೆ ನವೆಂಬರ್ 28 ರಂದು ನಡೆಸಬೇಕು ಮತ್ತು ಯಾವುದೇ ಕಾರಣಕ್ಕೂ ಅದನ್ನು ಲಿಸ್ಟ್​ನಿಂದ ತೆಗೆದುಹಾಕಬಾರದು ಎಂದು ಮನವಿ ಮಾಡಿದರು.

ನ್ಯಾಯಾಲಯವು ಇನ್ನೂ ಅರ್ಜಿಗಳನ್ನು ಪರಿಶೀಲಿಸಿಲ್ಲ ಮತ್ತು ಪರಿಶೀಲಿಸಿದ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್​ ಹೇಳಿತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಸಾಂವಿಧಾನಿಕ ಪೀಠವು ಅಕ್ಟೋಬರ್ 17 ರಂದು ಸಲಿಂಗ ವಿವಾಹಗಳನ್ನು ಅಂಗೀಕರಿಸುವ ವಿರುದ್ಧ ತೀರ್ಪು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!