ಆಂಧ್ರ ಸಿಎಂ ಜಗನ್​ ಮೋಹನ್ ರೆಡ್ಡಿ ಸಹಿತ 41 ಜನರಿಗೆ ಹೈಕೋರ್ಟ್ ನೋಟಿಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರಪ್ರದೇಶದಲ್ಲಿನ ಹಣಕಾಸು ಅವ್ಯವಹಾರ ಆರೋಪ ಸಂಬಂಧ ಅತೃಪ್ತ ವೈಎಸ್​ಆರ್​ ಕಾಂಗ್ರೆಸ್​ ಸಂಸದ ರಘುರಾಮ ಕೃಷ್ಣರಾಜು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುರುವಾರ ಹೈಕೋರ್ಟ್ ನಡೆಸಿದೆ.

ಈ ವೇಳೆ ಕೋರ್ಟ್, ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ, ಸಚಿವರು ಮತ್ತು ಐಪಿಎಸ್​, ಐಎಎಸ್​ ಅಧಿಕಾರಿಗಳು ಸೇರಿದಂತೆ 41 ಜನರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

ಹಣಕಾಸು ಅವ್ಯವಹಾರದ ಕುರಿತು ಸಿಬಿಐ ತನಿಖೆಗೆ ಕೋರಿ ಸಂಸದ ರಘುರಾಮ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!