ಹೊಸದಿಗಂತ ವರದಿ ಯಾದಗಿರಿ:
ವೈಜ್ಞಾನಿಕ ಸಮ್ಮೇಳನಗಳಿಗೆ ಸರ್ಕಾರದಿಂದ ಆರ್ಥಿಕ ಸಹಕಾರ ಒದಗಿಸಲು ಬಜೆಟ್ ನಲ್ಲಿ ಅನುದಾನ ಮೀಸಲಿರಿಸಲು ಪ್ರಯತ್ನಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಆಯೋಜಿಸಿದ್ದ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸತತ 40 ವರ್ಷಗಳ ಕಾಲ ಹುಲಿಕಲ ನಟರಾಜ ಅವರು ರಾಜ್ಯದ ಗ್ರಾಮೀಣ ಭಾಗದಲ್ಲಿ ಮೂಢನಂಬಿಕೆ ವಿರುದ್ಧ ಕೆಲಸ ಮಾಡುತ್ತಿದ್ದು, ಅವರಿಗೆ ನಾವೆಲ್ಲರೂ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ತಿಳಿಸಿದರು.
12ನೇ ಶತಮಾನದಲ್ಲಿ ವಚನಗಳ ಮೂಲಕ ಮೌಢ್ಯಗಳ ಬಗ್ಗೆ ಶರಣರು ಜಾಗೃತಿ ಮೂಡಿಸಿದ್ದಾರೆ. ಇಂದಿನ ದಿನ ನಾವು ಸಂವಿಧಾನದ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

