ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಜಗತ್ತಿನ ಪ್ರತಿಷ್ಠಿತ ವಿಶ್ವಕಪ್ ಟ್ರೋಫಿಯ ಮೇಲಿ ಕಾಲಿಟ್ಟು ಅವಮಾನ ಮಾಡಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ದಕ್ಕೆಯನ್ನುಂಟು ಮಾಡಿದ್ದಾರೆಂದು ಆರ್‌ಟಿಐ ಕಾರ್ಯಕರ್ತರೊಬ್ಬರು ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ವಿರುದ್ಧ ಡೆಲ್ಲಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರತಿಯನ್ನು ಪ್ರಧಾನಿ ಮೋದಿ ಅವರಿಗೂ ಕಳುಹಿಸಿದ್ದು, ಮಾರ್ಷ್ ಭಾರತದಲ್ಲಿ ಕ್ರಿಕೆಟ್ ಆಡುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ವಿಶ್ವಕಪ್ ಗೆಲುವಿನ ಖುಷಿಯಲ್ಲಿರುವ, ವಿಜೇತ ತಂಡದ ಆಟಗಾರ ಮಿಚೆಲ್ ಮಾರ್ಷ್ ವಿರುದ್ಧದ ಈಗ ವಿವಾದವೊಂದು ಸೃಷ್ಟಿಯಾಗಿದೆ. ವಿಶ್ವಕಪ್ ಟ್ರೋಫಿಯ ಮೇಲೆ ಮಾರ್ಷ್ ಕಾಲುಗಳನ್ನು ಇಟ್ಟುಕೊಂಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದೀಗ ಉತ್ತರ ಪ್ರದೇಶದ ಅಲಿಗಢದಲ್ಲಿ ಮಿಚೆಲ್ ಮಾರ್ಷ್ ವಿರುದ್ಧ ದೂರು ದಾಖಲಾಗಿದೆ. ಆರ್‌ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ಅವರು ದೂರು ದಾಖಲಿಸಿದ್ದು, ವಿಶ್ವಕಪ್ ಟ್ರೋಫಿಯ ಮೇಲೆ ಕಾಲುಗಳನ್ನು ಇಟ್ಟು ವಿಶ್ರಾಂತಿ ಮಾಡುವ ಮಾರ್ಷ್ ಅವರ ಕೃತ್ಯವು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳನ್ನು ತೀವ್ರವಾಗಿ ಅಸಮಾಧಾನಗೊಳಿಸಿದೆ ಎಂದು ಹೇಳಿದ್ದಾರೆ.