March 4, 2026
Wednesday, March 4, 2026
spot_img

ಹೊಸ ವರ್ಷದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಸಜ್ಜು: ಈ ಮೆಟ್ರೋ ಸ್ಟೇಷನ್, ಫ್ಲೈಓವರ್​ಗಳು ಕ್ಲೋಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಜನರು ರೆಡಿಯಾಗುತ್ತಿದ್ದು, ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ.

ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತದೆ. ವ್ಹೀಲಿಂಗ್ ಹಾಗೂ ಅಪಾಯಕಾರಿ ಸ್ಟಂಟ್ ಮಾಡುವವರ ಮೇಲೆ ಕಠಿಣ ನಿಗಾ ವಹಿಸಲಾಗಿದ್ದು, ಇಂತಹ ಕೃತ್ಯಗಳು ನಡೆಯುವ 92 ಸ್ಥಳಗಳನ್ನು ಗುರುತಿಸಿ ಅಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಅವರು ಹೇಳಿದರು.

ಎಂಜಿ ರಸ್ತೆ ಮೆಟ್ರೋ ನಿಲ್ದಾಣ ಬಂದ್
ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ಎಂಜಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗುತ್ತದೆ. ನಿಗದಿತ ಸಮಯಕ್ಕೆ ಮೆಟ್ರೋ ಸೇವೆಗಳನ್ನು ನಿಯಂತ್ರಿಸುವಂತೆ ಸೂಚನೆ ನೀಡಲಾಗಿದೆ.

ನಗರದ ಪಬ್‌, ರೆಸ್ಟೋರೆಂಟ್‌, ಕ್ಲಬ್‌ ಹಾಗೂ ರೆಸಾರ್ಟ್‌ಗಳಿಗೆ ಸಮಯ ಮಿತಿ ಕಡ್ಡಾಯಗೊಳಿಸಲಾಗಿದ್ದು, ಡಿಜೆ ಹಾಗೂ ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಮತ್ತು ಸಮಯ ಮಿತಿ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ವರ್ತನೆ, ಶಬ್ದ ಮಾಲಿನ್ಯ, ಅಕ್ರಮ ಪಾರ್ಟಿಗಳು ಹಾಗೂ ಅಪಾಯಕಾರಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಭದ್ರತೆಗಾಗಿ ಬೆಂಗಳೂರು ನಗರದ ಹಲವೆಡೆ ವಾಚ್ ಟವರ್‌ಗಳ ನಿಯೋಜನೆ ಮಾಡಲಾಗಿದೆ. ಸುರಕ್ಷಿತ ವಲಯಗಳ ಗುರುತಿಸುವಿಕೆ ಹಾಗೂ ಹೀಟ್ ಮ್ಯಾಪ್ ವ್ಯವಸ್ಥೆ ಮಾಡಲಾಗಿದೆ. ಸಹಾಯ, ದೂರುಗಳಿಗಾಗಿ ಮಹಿಳಾ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ. ಜನಸಂದಣಿ ನಿಯಂತ್ರಣಕ್ಕೆ ಮೆಟ್ರೋ ರೈಲುಗಳ ಸಮಯಾವಧಿ ವಿಸ್ತರಣೆ, ಸಂಚಾರ ಸುಗಮಗೊಳಿಸಲು ಬಸ್ ಸೇವೆಗಳ ಸಮಯಾವಧಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !