ಹೊಸದಿಗಂತ ವರದಿ ಹಾಸನ:
ಜಿಲ್ಲಾಧಿಕಾರಿ ಕಚೇರಿಯ ಗ್ರಾಮ ಒನ್ ಕಚೇರಿಯಲ್ಲಿ ಎಸ್ ಡಿಎ ಆಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶುಕ್ರವಾರ ರಾತ್ರಿ 9ರ ಸಮಯದಲ್ಲಿ ನಗರದ ರಕ್ಷಣಾಪುರಂನ ತಮ್ಮ ನಿವಾಸದಲ್ಲಿ ಸುಚಿತ್ರಾ (31) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರ ಪತಿ ವಿಎಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಅಪಘಾತದಲ್ಲಿ ಮೃತಪಟ್ಟ ಬಳಿಕ ಆ ಕೆಲಸ ಸುಚಿತ್ರಾಗೆ ಅನುಕಂಪದ ಆಧಾರದಲ್ಲಿ ಸಿಕ್ಕಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಹ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.