ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ 3,500 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಹೊಸ ವರ್ಷಕ್ಕೆ ರಾಜಧಾನಿ ಸಿದ್ಧತೆ ನಡೆಸಿಕೊಂಡಿದ್ದು, ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದೆ. ಬೇರೆ ಜಿಲ್ಲೆಗಳಿಂದಲೂ 1,200 ಪೊಲೀಸರನ್ನು ಈ ಬಾರಿ ನಿಯೋಜಿಸಲಾಗಿದೆ.
ಹೆಚ್ಚಿನ ಸಂಖ್ಯೆಯ ಮಹಿಳಾ ಪೊಲೀಸರು ಹಾಗೂ ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜನೆ ಮಾಡಲಾಗುತ್ತದೆ. 4 ಕಂಟ್ರೋಲ್ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್, 55 ಅಂಬ್ಯುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆಯ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು. ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಲಾಗುತ್ತದೆ. ವ್ಹೀಲಿಂಗ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

