ಹೊಸ ದಿಗಂತ ವರದಿ, ಮಡಿಕೇರಿ:
ಮೇಯಲು ಬಿಟ್ಟಿದ್ದ ಹಸುವೊಂದು ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ನಡೆದಿದೆ.
ಗ್ರಾಮದ ಕಾಡ್ಯಮಾಡ ಬಿ. ಸುಮನ್ ಅವರಿಗೆ ಸೇರಿದ ಹಸುವನ್ನು ಎಂದಿನಂತೆ ತೋಟದಲ್ಲಿ ಮೇಯಲು ಬಿಟ್ಟ ಸಂದರ್ಭ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ.
ಸ್ಥಳಕ್ಕೆ ಭೇಟಿ ನೀಡಿದ ರೈತ ಸಂಘದ ಪ್ರತಿನಿಧಿಗಳು, ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ