ಕೊಚ್ಚಿ। ಸಂಗೀತ ಕಾರ್ಯಕ್ರಮದ ವೇಳೆ ಕಾಲ್ತುಳಿತ: ನಾಲ್ವರ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ‘ಕುಸಾಟ್’ನಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಘಾತಕಾರಿ ಘಟನೆ ನಡೆದಿದೆ.  ಟೆಕ್ ಫೆಸ್ಟ್ ಸಂದರ್ಭ ಕಾಲ್ತುಳಿತ ಉಂಟಾಗಿ ಹಲವರು ಗಾಯಗೊಂಡು, ನಾಲ್ವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕನಿಷ್ಠ 40 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಕಲಮಸ್ಸೆರಿಯ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ. ಇಲ್ಲಿನ ಬಯಲು ರಂಗಮಂದಿರದಲ್ಲಿ ನಿಖಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ವರದಿಗಳ ಪ್ರಕಾರ, ಹಠಾತ್ ಮಳೆಯ ನಂತರ ವಿದ್ಯಾರ್ಥಿಗಳು ಸಭಾಂಗಣದೊಳಗೆ ಧಾವಿಸಿದಾಗ ಕಾಲ್ತುಳಿತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!