ಹೊಸ ದಿಗಂತ ವರದಿ, ಮಡಿಕೇರಿ:
ಪ್ರವಾಸಿಗರಿದ್ದ ಟೆಂಪೋ ಟ್ರಾವೆಲರ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಸಿಂಕೋನ ಬಳಿ ಶನಿವಾರ ರಾತ್ರಿ ನಡೆದಿದೆ.
ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುತ್ತಿದ್ದ ಪ್ರವಾಸಿಗರಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿಕೊಂಡಿತೆನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.