ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತವು ಪ್ರತಿವರ್ಷ ನವೆಂಬರ್ 26ರಂದು ಸಂವಿಧಾನ ದಿನ ಅಥವಾ ರಾಷ್ಟ್ರೀಯ ಕಾನೂನು ದಿನವನ್ನು ಆಚರಿಸುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ಇಲ್ಲಿ ತಿಳಿಯಿರಿ.
1949ರ ನವೆಂಬರ್ 26 ರಂದು ಭಾರತೀಯ ಸಂವಿಧಾನವನ್ನು ಸಂವಿಧಾನ ಸಭೆಯಲ್ಲಿ ಅಂಗೀಕರಿಸಲಾಯಿತು. ಬಳಿಕ ಭಾರತ ಸಂವಿಧಾನ 1956ರ ಜನವರಿ 26 ರಂದು ಜಾರಿಗೆ ಬಂದಿತು. ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯಲ್ಪಡುವ ಬಿ.ಆರ್. ಅಂಬೇಡ್ಕರ್ (14 ಏಪ್ರಿಲ್ 1891) ಅವರ 125 ನೇ ಜನ್ಮದಿನದ ವರ್ಷವಾಗಿದ್ದು, ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸುವುದರೊಂದಿಗೆ ಕೇಂದ್ರವು 2015 ರಲ್ಲಿ ನವೆಂಬರ್ 26 ಅನ್ನು ಸಂವಿಧಾನ ದಿನ ಎಂದು ಘೋಷಿಸಿತು. ನವೆಂಬರ್ 19, 2015 ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ನವೆಂಬರ್ 26 ಅನ್ನು ‘ಸಂವಿಧಾನ ದಿನ’ ಎಂದು ಆಚರಿಸಲು ಭಾರತ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿತು.
ಭಾರತ ಸಂವಿಧಾನ ದಿನವು ಅಪಾರ ಐತಿಹಾಸಿಕ ಹಾಗೂ ಸಾಂಕೇತಿಕ ಮಹತ್ವವನ್ನು ಹೊಂದಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ದೇಶ ಇತಿಹಾಸದಲ್ಲಿ ಘಟಿಸಿದ ಮಹತ್ವದ ಹಾಗೂ ಅದ್ಭುತ ಕ್ಷಣವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ನೇತೃತ್ವದ ಸಂವಿಧಾನ ರಚನಾ ಸಭೆಯ ಸದಸ್ಯರ ಅವಿರತ ಪ್ರಯತ್ನಗಳನ್ನು ಈ ದಿನ ನೆನಪಿಸುತ್ತದೆ.
ಜನಸಾಮಾನ್ಯರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ದಿನವನ್ನು ಈ ಆಚರಿಸಲಾಗುತ್ತದೆ.