ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪು ಯಾರೇ ಮಾಡಿರಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಈ ಬಗ್ಗೆ ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ತೆಲಂಗಾಣದಲ್ಲಿ ಇಂದು ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ, ಇಲ್ಲಿ ನಮ್ಮ ಗೆಲುವು ನೂರಕ್ಕೆ ನೂರರಷ್ಟು ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.