ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರು ಕ್ರಿಸ್‌ಮಸ್ ಹಬ್ಬದ ವೇಳೆಗೆ ಸುರಕ್ಷಿತವಾಗಿ ಮರಳಿ ಮನೆ ತಲುಪಲಿದ್ದು, ಕುಟುಂಬದವರೊಂದಿಗೆ ಹಬ್ಬ ಆಚರಿಸಲಿದ್ದಾರೆ ಎಂದು ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಹೇಳಿದ್ದಾರೆ.
ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವೇಳೆ ಅಡೆತಡೆಗಳು ಎದುರಾಗುತ್ತಿವೆ, ಹೀಗಾಗಿ ವಿಳಂಬವಾಗಿದೆ. ಕಾರ್ಮಿಕರನ್ನು ರಕ್ಷಣೆ ಮಾಡುತ್ತೇವೆ, ಆದರೆ ಎಷ್ಟು ದಿನದೊಳಗೆ ಎಂದು ಹೇಳಲು ಸಾಧ್ಯವಿಲ್ಲ. ಒಟ್ಟಿನಲ್ಲಿ ಕಾರ್ಮಿಕರು ತಮ್ಮ ಕುಟುಂಬದೊಂದಿಗೆ ಕ್ರಿಸ್‌ಮಸ್ ಆಚರಿಸಲಿದ್ದಾರೆ ಎಂದು ಅವರು ಭರವಸೆ ನೀಡಿದರು.