ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ 30 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ತಿರುವನಂತಪುರಂ-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯ ನೆಯ್ಯಟ್ಟಿಂಕರ ಬಳಿ ಶನಿವಾರ ರಾತ್ರಿ ನಡೆದಿದೆ.
ಕೇರಳ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್‌ಗಳು ರಾತ್ರಿ ರಸ್ತೆ ಕಾಣದೆ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಈ ವೇಳೆ ಬಸ್ಸಿನಲ್ಲಿದ್ದ 30 ಮಂದಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಘಟನೆಯಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.