ವಿದ್ಯಾನಗರ ಪೊಲೀಸರಿಂದ ಅಂತರ್ ಜಿಲ್ಲಾ ಕಳ್ಳನ ಬಂಧನ: 5 ಬೈಕ್ ಗಳ ಜಪ್ತಿ

ಹೊಸದಿಗಂತ ವರದಿ,ಹುಬ್ಬಳ್ಳಿ:

ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳನನ್ನು ಬಂಧಿಸಿರುವ ವಿದ್ಯಾನಗರ ಠಾಣೆ ಪೊಲೀಸರ ತಂಡ ಬಂಧಿತನಿಂದ ೨.೬೦ ಲಕ್ಷ ರೂ. ಮೌಲ್ಯದ ೫ ಬೈಕ್ ಜಪ್ತಿ ಮಾಡಿದೆ.

ಹಾವೇರಿ ಜಿಲ್ಲೆಯ ತಡಸ ಗ್ರಾಮದ ಸಚಿನ್ ಹೊನ್ನಳ್ಳಿ ಬಂತ ಆರೋಪಿ. ಇಲ್ಲಿಯ ವಿದ್ಯಾನಗರದ ಅಂಗಡಿಯೊಂದರ ಎದುರು ನಿಲ್ಲಿಸಿದ್ದ ಬೈಕ್‌ನ್ನು ನ.೨೧ ರಂದು ಕಳುವಾದ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪಿಐ ಜಯಂತ ಗೌಳಿ ನೇತೃತ್ವದ ತಂಡ ನ. ೨೫ರಂದು ಬೆಳಗ್ಗೆ ೮ಕ್ಕೆ ಇಲ್ಲಿಯ ಉಣಕಲ್ ಬಳಿ ನಂಬರ್ ಪ್ಲೇಟ್ ಇಲ್ಲದ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದಿದ್ದಾರೆ. ಬಳಿಕ ಆತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆತ ಬೈಕ್ ಕಳ್ಳ ಎಂಬುದು ಗೊತ್ತಾಗಿದೆ. ಬಳಿಕ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹುಬ್ಬಳ್ಳಿ, ಹಳಿಯಾಳ ಮತ್ತು ಕಲಘಟಗಿಯಲ್ಲಿ ಬೈಕ್ ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದಾನೆ. ಅದರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಬೈಕ್ ಜಪ್ತಿ ಮಾಡಿದ್ದಾರೆ.

ವಿದ್ಯಾನಗರ ಠಾಣೆ ಪಿಐ ಜಯಂತ ಗೌಳಿ ನೇತೃತ್ವದಲ್ಲಿ ಪಿಎಸ್‌ಐಗಳಾದ ಶ್ರೀಮಂತ ಹುಣಸಿಕಟ್ಟಿಘಿ, ಜಿ.ಎನ್. ಕಲ್ಯಾಣಿ ಮತ್ತು ಸಿಬ್ಬಂದಿ ಶಿವಾನಂದ ತಿರಕಣ್ಣವರ, ಮಲ್ಲಿಕಾರ್ಜುನ ಧನಿಗೊಂಡ, ಮಂಜುನಾಥ ಯಕ್ಕಡಿ, ಪರಶುರಾಮ ಹಿರಗಣ್ಣವರ, ವೈಘಿ.ಎಂ. ಶೇಂಡ್ಗೆ ತಂಡ ಕಾರ್ಯಾಚರಣೆ ನಡಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತೆ ರೇಣುಕಾ ಶ್ಲಾಘಿಸಿ ಬಹುಮಾನ ಘೋಷಣೆ ಮಾಡಿದ್ದಾರೆ.

ಜೂಜಾಟ್ ೧೦ ಜನರ ಬಂಧನ: ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಜೂಜಾಟ ಆಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಗ್ರಾಮೀಣ ಪೊಲೀಸರು ೧೦ ಜನ ಆರೋಪಿಗಳ ಬಂಧಿಸಿ ಅವರಿಂದ ೨೩ ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!