ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಹೆಸರನ್ನು ‘ಆಯುಷ್ಮಾನ್ ಆರೋಗ್ಯ ಮಂದಿರ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವೊಂದನ್ನು ಕಳುಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಪೋರ್ಟಲ್ನಲ್ಲಿ ಮರುನಾಮಕರಣ ಮಾಡಲಾದ ಪ್ರಾಥಮಿಕ ಆರೋಗ್ಯ ಸೌಲಭ್ಯಗಳ ಛಾಯಾಚಿತ್ರಗಳನ್ನು ಅಪ್ಲೋಡ್ ಮಾಡಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮರುನಾಮಕರಣ ಮಾಡಲಾದ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳು ‘ಆರೋಗ್ಯಂ ಪರ್ಮಂ ಧನಮ್’. – ಎಂಬ ಟ್ಯಾಗ್ ಲೈನ್ ಕೂಡಾ ಹೊಂದಿವೆ.