ಕದನ ವಿರಾಮ: ಮೂರನೇ ಬ್ಯಾಚ್‌ನಲ್ಲಿ 17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಮಾಸ್ ಮತ್ತು ಇಸ್ರೇಲ್ ನಡುವಿನ ತಾತ್ಕಾಲಿಕ ಕದನ ವಿರಾಮ ಒಪ್ಪಂದದ ಭಾಗವಾಗಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಹಂತದಲ್ಲಿ 25, ಎರಡನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿತ್ತು. ಅದಾಗ್ಯೂ ಭಾನುವಾರ ರಾತ್ರಿ ಮೂರನೇ ಹಂತದಲ್ಲಿ 17 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದೆ.

17 ಒತ್ತೆಯಾಳುಗಳ ಪೈಕಿ 13 ನಾಗರಿಕರು, ಮೂವರು ಥಾಯ್ಲೆಂಡ್‌ ನಾಗರಿಕರು ಹಾಗೂ ನಾಲ್ಕು ವರ್ಷದ ಬಾಲಕಿ ಸೇರಿದ್ದಾರೆ. ಅದಕ್ಕೆ ಪ್ರತಿಯಾಗಿ ಇಸ್ರೇಲ್ 39 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಇದರೊಂದಿಗೆ ಹಮಾಸ್‌ ಉಗ್ರರು ಮೂರು ಹಂತಗಳಲ್ಲಿ ಒಟ್ಟು 69 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದಂತಾಗಿದೆ. ಸೋಮವಾರ (ನವೆಂಬರ್‌ 27) ನಾಲ್ಕನೇ ಹಂತದಲ್ಲಿ ಇನ್ನಷ್ಟು ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ.

ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಗೆ ನೀಡಿದೆ. ಈ ಒಪ್ಪಂದದ ಭಾಗವಾಗಿ 3 ಹಾಗೂ 1ರ ಅನುಪಾತದಲ್ಲಿ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಅಂದರೆ ಹಂತ, ಹಂತವಾಗಿ ಹಮಾಸ್‌ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್‌ನಿಂದ 150 ಪ್ಯಾಲೆಸ್ಟೀನ್‌ ಕೈದಿಗಳ ಬಿಡುಗಡೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!