ಅಮೆರಿಕದಲ್ಲಿ ಹೆಚ್ಚಿದ ಖಲಿಸ್ತಾನಿಗಳ ದೌರ್ಜನ್ಯ, ಭಾರತೀಯ ರಾಯಭಾರಿ ಮೇಲೆ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿದೇಶದಲ್ಲಿ ಖಲಿಸ್ತಾನಿಗಳ ಗೂಂಡಾಗಿರಿ ಮುಂದುವರಿದಿದ್ದು, ಭಾರತೀಯ ರಾಯಭಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಅಮೆರಿಕದ ನ್ಯೂಯಾರ್ಕ್​​​ನಲ್ಲಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರನ್ನು ಗುರುದ್ವಾರದೊಳಗೆ ತಳ್ಳಿದ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ. ತರಂಜಿತ್ ಸಿಂಗ್ ಸಂಧು ಲಾಂಗ್ ಐಲ್ಯಾಂಡ್‌ನಲ್ಲಿರುವ ಹಿಕ್ಸ್‌ವಿಲ್ಲೆ ಗುರುದ್ವಾರಕ್ಕೆ ಭೇಟಿ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ಅಷ್ಟೇ ಅಲ್ಲ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಧು ಸಂಚು ರೂಪಿಸಿದ್ದ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.

ಕೆಲವರು ತರಂಜಿತ್ ಸಿಂಗ್ ಸಂಧು ಅವರನ್ನು ಹೊರಗೆ ಎಳೆದೊಯ್ಯಲು ಪ್ರಯತ್ನಿಸಿದರು. ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹ ಅಭಿಯಾನದಲ್ಲಿ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರ ಪಾತ್ರದ ಬಗ್ಗೆ ಆಧಾರರಹಿತ ಪ್ರಶ್ನೆಗಳನ್ನು ಕೇಳುತ್ತಾ ತಮ್ಮ ಗೂಂಡಾಗಿರಿಯನ್ನು ಪ್ರದರ್ಶಿಸಿದರು.

ಈ ಕುರಿತು ಖಲಿಸ್ತಾನಿ ಬೆಂಬಲಿಗರು ಅಮೆರಿಕದಲ್ಲೂ ಸಕ್ರಿಯರಾಗಿದ್ದಾರೆ ಎಂದು ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ ಟ್ವೀಟ್‌ ಮಾಡುವ ಮೂಲಕ ಹಲ್ಲೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!