ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಜಾಲ ಬಂಧನ ಬಳಿಕ ಮತ್ತೊಂದು ಭಯಾನಕ ಗ್ಯಾಂಗ್ ಪತ್ತೆಯಾಗಿದ್ದು, ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರನ್ನುಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಹಾಗೂ ಶರಣ್ಯ ಬಂಧಿತ ಆರೋಪಿಗಳು.
ರಾಜರಾಜೇಶ್ವರಿ ನಗರದಲ್ಲಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡುತ್ತಿದ್ದ ವೇಳೆಯೇ ಆರೊಪಿಗಳು ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹಸುಗೂಸನ್ನು ಪೊಲೀಸರು ರಕ್ಷಿಸಿದ್ದಾರೆ.