ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೀಪ್ಫೇಕ್ ವಿಡಿಯೋಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಬಾಲಿವುಡ್ ನಟಿ ಆಲಿಯಾ ಭಟ್ ವಿಡಿಯೋಗಳು ವೈರಲ್ ಆಗುತ್ತಿದೆ.
ರಶ್ಮಿಕಾ ಮಂದಣ್ಣ, ಕಾಜೋಲ್, ಕತ್ರಿನಾ ಕೈಫ್ ಮತ್ತು ಸಾರಾ ತೆಂಡೂಲ್ಕರ್ ಸೇರಿದಂತೆ ಹಲವಾರು ಜನಪ್ರಿಯ ನಟಿಯರ ಡೀಪ್ಫೇಕ್ಗಳು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದೀಗ ಆಲಿಯಾ ಭಟ್ ಸೇರಿದ್ದು, ಕೃತಕ ಬುದ್ಧಿಮತ್ತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಕಿಡಿಗೇಡಿಗಲ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಆಲಿಯಾ ಭಟ್ ಮುಖ ಡೀಪ್ಫೇಕ್ ಮಾಡಿ ಮಹಿಳೆ ಅಶ್ಲೀಲ ಸನ್ನೆಗಳನ್ನು ತೋರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕೆಲ ದಿನಗಳ ಹಿಂದೆ ಬಹುಭಾಷ ನಟಿ ರಶ್ಮಿಕಾ ಮಂದಣ್ಣ ಡೀಪ್ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ದೇಶಾದ್ಯಂತ ಡೀಪ್ಫೇಕ್ ಕುರಿತು ಸಾಕಷ್ಟು ಚರ್ಚೆಗಳು ಆರಂಭವಾಗಿತ್ತು. ಕೇಂದ್ರ ಸರ್ಕಾರವು ಭಾರತದಲ್ಲಿ ಸಕ್ರಿಯವಾಗಿರುವ ಸೋಷಿಯಲ್ ಮೀಡಿಯಾಗಳುಕಂಪನಿಗಳ ಜೊತೆ ಸಭೆ ನಡೆಸಿತ್ತು.