ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (Human Rights Commission) ಸರಕಾರ ಅಧ್ಯಕ್ಷರನ್ನು ಆಯ್ಕೆ ಮಾಡಿದೆ.
ನಿವೃತ್ತ ನ್ಯಾ. ಎಲ್. ನಾರಾಯಣಸ್ವಾಮಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಅಧ್ಯಕ್ಷರ ಜೊತೆಗೆ ಇಬ್ಬರು ಸದಸ್ಯರನ್ನು ಸಹ ಆಯ್ಕೆ ಮಾಡಿದೆ. ನಿವೃತ್ತ ಜಿಲ್ಲಾ ನ್ಯಾ. ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಾಮ್ ಭಟ್ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.
ಎಲ್. ನಾರಾಯಣಸ್ವಾಮಿ ಅವರು ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದಾರೆ. ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ. ಈಗ ಅಧ್ಯಕ್ಷರು ಆಯ್ಕೆಯಾಗಿದ್ದರಿಂದ ತನಿಖೆ ಮುಂದುವರೆಯಲಿವೆ.