ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಆನಾರೋಗ್ಯದ ಕಾರಣ ನೀಡಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಗಂಭೀರವಾದ ಆರೋಗ್ಯದ ಸಮಸ್ಯೆಗಳು ಕಂಡುಬಂದಿಲ್ಲ ಎಂದು ಹೇಳಿ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ವೇಳೆ ವಿಚಾರಣಾ ನ್ಯಾಯಾಲಯಕ್ಕೆ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯವು ಹೇಳಿದ್ದು, ಬಾಲಾಜಿ ಪರ ವಕೀಲರು ಸುಪ್ರೀಂ ಕೋರ್ಟ್ನಿಂದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.