ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಸಲ್ಲಿಸಲು ಹೆಚ್ಚುವರಿ ಮೂರು ವಾರಗಳ ಕಾಲಾವಕಾಶ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯಕ್ಕೆ ಇಂದು (ಮಂಗಳವಾರ) ಅರ್ಜಿ ಸಲ್ಲಿಸಿದೆ.
ಸಮಗ್ರ ವರದಿಯನ್ನು ಹೊಂದಿಸಲು ಮತ್ತು ಅಂತಿಮಗೊಳಿಸಲು ಹೆಚ್ಚಿನ ಸಮಯವನ್ನು ಕೋರಿ ಎಎಸ್ಐ ಅನ್ನು ಪ್ರತಿನಿಧಿಸುವ ಸ್ಥಾಯಿ ಸರ್ಕಾರಿ ವಕೀಲ ಅಮಿತ್ ಶ್ರೀವಾಸ್ತವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಮಸೀದಿ ಸಂಕೀರ್ಣದ ವೈಜ್ಞಾನಿಕ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇಂದು ಅಂದರೆ ಮಂಗಳವಾರ ಕೊನೇ ದಿನವಾಗಿತ್ತು. ಆದರೆ ಎಎಸ್ಐ ಮತ್ತೊಮ್ಮೆ ಕಾಲಾವಕಾಶ ಕೋರಿದೆ. ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಗಡುವನ್ನು ಈಗಾಗಲೇ ಹಲವು ಬಾರಿ ವಿಸ್ತರಿಸಲಾಗಿದೆ. ಈ ಹಿಂದೆ ವರದಿ ಸಲ್ಲಿಸಲು ನ್ಯಾಯಾಲಯ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗಿದೆ. ನವೆಂಬರ್ 18 ರಂದು ಎಎಸ್ಐ 15 ದಿನಗಳ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು. ಹಲವು ಸೂಚನೆಗಳೊಂದಿಗೆ ನ್ಯಾಯಾಲಯ 10 ದಿನಗಳ ಕಾಲಾವಕಾಶ ನೀಡಿತ್ತು.