ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರವು ಮಂಗಳವಾರ ಸಂಜೆ 5 ಗಂಟೆಗೆ ಕೊನೆಗೊಂಡಿದೆ. ನವೆಂಬರ್ 30ರಂದು ಮತದಾನ ನಡೆಯಲಿದೆ .
ಆಡಳಿತಾರೂಢ ಬಿಆರ್‌ಎಸ್ (ಭಾರತ ರಾಷ್ಟ್ರ ಸಮಿತಿ) ಪಕ್ಷವು ಸತತ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಹೋರಾಟ ನಡೆಸುತ್ತಿದೆ. ಈ ಬಾರಿ ಬಿಜೆಪಿಯು ರಾಜ್ಯದಲ್ಲಿ ಹೊಸ ಹುರುಪಿನೊಂದಿಗೆ ಪ್ರಚಾರ ಮಾಡಿದೆ .
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ಚುನಾವಣೆ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ, ಸೋಮವಾರ ಹೈದರಾಬಾದ್‌ನಲ್ಲಿ ಭಾರಿ ಅಬ್ಬರದ ನಡುವೆ ರೋಡ್‌ಶೋ ಕೂಡ ನಡೆಸಿದರು.
ಬಿಆರ್‌ಎಸ್ ಪಕ್ಷದ ವರಿಷ್ಠ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಅವರ ಪುತ್ರ ಮತ್ತು ಸಚಿವ ಕೆ.ಟಿ.ರಾಮರಾವ್, ಟಿಪಿಸಿಸಿ ಅಧ್ಯಕ್ಷ ಎ ರೇವಂತ್ ರೆಡ್ಡಿ ಮತ್ತು ಬಿಜೆಪಿ ಲೋಕಸಭಾ ಸದಸ್ಯರಾದ ಬಂಡಿ ಸಂಜಯ್ ಕುಮಾರ್, ಡಿ ಅರವಿಂದ್ ಮತ್ತು ಸೋಯಂ ಬಾಪುರರಾವ್ ಸೇರಿ 2,290 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕೆಸಿಆರ್ ಅವರು ಗಜ್ವೇಲ್ ಮತ್ತು ಕಾಮರೆಡ್ಡಿ ಈ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.
ತೆಲಂಗಾಣ ಸೇರಿ 5 ರಾಜ್ಯಗಳ ಮತಎಣಿಕೆ ಡಿಸೆಂಬರ್ 3ರಂದು ನಡೆಯಲಿದೆ.