‘ಕಾಂತಾರ’ ಮುಕುಟಕ್ಕೆ ಮತ್ತೊಂದು ಗರಿ: ಒಲಿದು ಬಂತು ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಕಾಂತಾರ’ ಚಾಪ್ಟರ್ 1 (Kantara) ಸಿನಿಮಾದ ಮುಹೂರ್ತ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ದೇಶದ ಚಿತ್ರರಂಗವೇ ಕನ್ನಡ ಚಿತ್ರೋದ್ಯಮದೆಡೆ ತಿರುಗಿ ನೋಡುವಂತೆ ಮಾಡಿದ್ದ ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಕಾಂತಾರ’ ಚಿತ್ರ ಗೋವಾ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹೊಂಬಾಳೆ ಸಂಸ್ಥೆ ನಿರ್ಮಾಣದ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ಕಾಂತಾರ ಸಿನಿಮಾ ಇದೀಗ ಗೋವಾದಲ್ಲಿ ನಡೆಯುತ್ತಿರುವ 52ನೇ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿಯನ್ನು(Silver Peacock Award) ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.

70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್‌ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!