ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಬಿಷ್ಣೋಯ್ ಗ್ಯಾಂಗ್ನಿಂದ ಮೊತ್ತೊಂದು ಬೆದರಿಕೆ ಬಂದಿದೆ.
ಮತ್ತೆ ಶಾರುಖ್ ಇ-ಮೇಲ್ ಖಾತೆಗೆ ಸಂದೇಶವೊಂದನ್ನು ಕಳುಹಿಸಿದ್ದು, ವಿದೇಶದಲ್ಲಿ ನೆಲೆಸೋಕೆ ವಿಸಾ ಇರಬಹುದು. ಸಾವಿಗೆ ಇಲ್ಲ ಎಂದು ಬರೆದಿದ್ದಾನೆ.
ಲಾರೆನ್ಸ್ ನಿಂದ ಜೀವ ಬೆದರಿಕೆ (Life Threat) ಮೇಲ್ ಬರುತ್ತಿದ್ದಂತೆಯೇ ಮತ್ತೆ ಪೊಲೀಸ್ ಅಧಿಕಾರಿಗಳು ಸಲ್ಮಾನ್ ಮನೆಯ ಭದ್ರತೆಯನ್ನು ತಪಾಸಣೆ ಮಾಡಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗದಿರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ಮತ್ತಷ್ಟು ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚಿಸಿದ್ದಾರೆ.
ಪಂಜಾಬಿ ಗಾಯಕ ಮತ್ತು ನಟ ಗಿಪ್ಪಿ ಗ್ರೆವಾಲ್ ಅವರ ಕೆನಡಾದ ಮನೆ ಎದುರು ಶೂಟೌಟ್ ನಡೆದಿತ್ತು. ಇದನ್ನು ಮಾಡಿದ್ದು ನಾವೇ ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ‘ನೀವು (ಗಿಪ್ಪಿ) ಸಲ್ಮಾನ್ ಖಾನ್ ಅವರನ್ನು ನಿಮ್ಮ ಸಹೋದರ ಎಂದು ಪರಿಗಣಿಸಿದ್ದೀರಿ. ನಿಮ್ಮ ಸಹೋದರ ಮುಂದೆ ಬಂದು ನಿಮ್ಮನ್ನು ಉಳಿಸುವ ಸಮಯ. ಸಲ್ಮಾನ್ ಖಾನ್ಗೂ ಈ ಸಂದೇಶ ನೀಡಲಾಗುತ್ತಿದೆ. ದಾವೂದ್ ನಿಮ್ಮನ್ನು ಕಾಪಾಡುತ್ತಾನೆ ಎಂಬ ಭ್ರಮೆ ಬೇಡ. ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ’ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ಖಾತೆ ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಇದೆ.
‘ಸಿದ್ದು ಮುಸೇವಾಲಾ ಸಾವಿನ ನಂತರ ನಿಮ್ಮ ನಾಟಕೀಯ ಪ್ರತಿಕ್ರಿಯೆಯನ್ನು ನಾವು ನಿರ್ಲಕ್ಷಿಸಿಲ್ಲ. ಅವನು ಯಾವ ರೀತಿಯ ವ್ಯಕ್ತಿಯಾಗಿದ್ದ, ಅವನ ಕ್ರಿಮಿನಲ್ ರೆಕಾರ್ಡ್ ಏನು ಎಂಬುದು ನಮಗೆಲ್ಲರಿಗೂ ತಿಳಿದಿದೆ. ನೀವು ಈಗ ನಮ್ಮ ರೇಡಾರ್‌ನಲ್ಲಿ ಇದ್ದೀರಿ. ಇದನ್ನು ಟ್ರೇಲರ್ ಎಂದು ಪರಿಗಣಿಸಿ. ಸಂಪೂರ್ಣ ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಯಾವುದೇ ದೇಶಕ್ಕೆ ಓಡಿಹೋಗು ಆದರೆ ಸಾವಿಗೆ ವೀಸಾ ಅಗತ್ಯವಿಲ್ಲ ಎಂಬುದನ್ನು ನೆನಪಿಡಿ. ಸಾವು ಆಹ್ವಾನವಿಲ್ಲದೆ ಬರಬಹುದು’ ಎಂದು ಬೆದರಿಕೆ ಹಾಕಲಾಗಿದೆ.
ಬೆದರಿಕೆಯ ಪೋಸ್ಟ್ ಅನ್ನು ಯಾರು ಹಾಕಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಸೋಶಿಯಲ್ ಮೀಡಿಯಾ ಖಾತೆ ನಿಜವಾಗಿಯೂ ಲಾರೆನ್ಸ್ ಬಿಷ್ಣೋಯ್ದೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ’ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಈ ಹಿಂದೆ ಲಾರೆನ್ಸ್ ಸಹಚರರನ್ನು ಬಂಧಿಸಿ ಅಗತ್ಯ ಮಾಹಿತಿಯನ್ನು ಮುಂಬೈ ಪೊಲೀಸ್ ಪಡೆದಿದ್ದಾರೆ. ಹಾಗಾಗಿ ಈ ಹಿಂದೆಯೂ ಸಲ್ಮಾನ್ ಖಾನ್ ಗೆ ಭಾರೀ ಭದ್ರತೆ ನೀಡಲಾಗಿತ್ತು.
ಸಲ್ಮಾನ್ ಖಾನ್ ಗೆ ಈ ಹಿಂದೆ ಬರೆದ ಪತ್ರದಲ್ಲಿ ಮನೆಯ ಮುಂದೇ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿರುವ ವಿಷಯವನ್ನು ಲಾರೆನ್ಸ್ ಅಂಡ್ ಟೀಮ್ ಬಹಿರಂಗಪಡಿಸಿತ್ತು. ಈ ಹತ್ಯೆಗಾಗಿ ಗನ್ ಕೂಡ ಖರೀದಿಸಲಾಗಿತ್ತು ಎನ್ನುವ ವಿಷಯವನ್ನು ಬಾಯ್ಬಿಟ್ಟಿದ್ದರು. ಅಲ್ಲದೇ, ಯಾವುದೇ ಕಾರಣಕ್ಕೂ ಸಲ್ಮಾನ್ ಖಾನ್ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದೂ ಹೇಳಿರುವ ಅಂಶ ಬೆಳಕಿಗೆ ಬಂದಿತ್ತು.