ಹೊಸದಿಗಂತ ವರದಿ, ವಿಜಯನಗರ:
ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಪ್ರಾರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದರು.
ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಅವರು, ಬುಧವಾರ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೃಷಿ ಬೀಜೋತ್ಪಾದನೆ ಕೇಂದ್ರ ಸುಮಾರು 10 ಎಕರೆ ವಿಸ್ತೀರ್ಣದಲ್ಲಿದ್ದು, ಇಲ್ಲಿ ಕೃಷಿ ವಿಜ್ಞಾನ ಕೇಂದ್ರ ಪ್ರಾರಂಭಿಸಲು ಅನುಕೂಲವಾದ ಮೂಲ ಸೌಕರ್ಯಗಳಿದ್ದು, ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದರು.
ಈ ಕುರಿತು ಸಚಿವರು, ಶಾಸಕರ ಬೇಡಿಕೆಗೆ ಸಕಾರಾತ್ಮಕ ಸ್ಪಂಧಿಸಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು, ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.