ಕಾಲೇಜಿನಲ್ಲಿ ಅವಮಾನ: ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ವರದಿ, ಹಾನಗಲ್ಲ:

ಕಾಲೇಜಿನಲ್ಲಿ ಪ್ರಾಚಾರ್ಯರು ನಿಂದಿಸಿ ಅವಮಾನ ಮಾಡಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪಟ್ಟಣದ ಎನ್‌ಸಿಜೆಸಿ ಕಾಲೇಜಿನ ಆದಿತ್ಯ ರಘುವೀರ ಚವ್ಹಾಣ (೧೬)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಆದಿತ್ಯ ತಾಲೂಕಿನ ಡೊಳ್ಳೇಶ್ವರದ ಅಜ್ಜಿಯ ಮನೆಯಲ್ಲಿದ್ದುಕೊಂಡು, ಹಾನಗಲ್ಲಿನ ಎನ್‌ಸಿಜೆಸಿ ಕಾಲೇಜಿನಲ್ಲಿ ಪಿಯುಸಿ ಕಾಮರ್ಸ ವಿಭಾಗದ ಮೊದಲ ವರ್ಷದಲ್ಲಿ ಕಲಿಯುತ್ತಿದ್ದ. ಈತ ಇತ್ತಿಚೇಗೆ ಕೆಲವು ದಿನಗಳಿಂದ ಸರಿಯಾಗಿ ಕಾಲೇಜ್‌ಗೆ ಹಾಜರಾಗುತ್ತಿರಲಿಲ್ಲ ಎಂದು ಅವರ ತಂದೆ ರಘುವೀರ ಚವ್ಹಾಣರನ್ನು ಕರೆಯಿಸಿ ಅವರ ಎದುರಿಗೆ ಪ್ರಾಚಾರ್ಯರು ಬೈದು ಬುದ್ದಿ ಹೇಳಿದ್ದರು.

ಈ ಘಟನೆಯ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಡೊಳ್ಳೇಶ್ವರದ ಬಾಬಣ್ಣ ಆರೇರ ಎಂಬುವರ ತೋಟದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು.

ತೀವೃವಾದ ಸುಟ್ಟ ಗಾಯಗಳಿಂದ ನರಳುತ್ತಿದ್ದ ವಿದ್ಯಾರ್ಥಿ ಆದಿತ್ಯನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹುಬ್ಬಳ್ಳಿಗೆ ತೆರಳುವ ಮಾರ್ಗಮಧ್ಯೆ ಗಾಯಾಳು ಆದಿತ್ಯ ಪ್ರಾಚಾರ್ಯರ ಮೇಲೆ ಆರೋಪ ಮಾಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೀವ್ರ ಗಾಯಗೊಂಡಿದ್ದ ಆದಿತ್ಯ ಚಿಕಿತ್ಸೆ ಫಲಿಸದೇ ಮಂಗಳವಾರ ತಡರಾತ್ರಿ ಮೃತ ಪಟ್ಟಿದ್ದಾನೆ.

ಪ್ರಾಚಾರ್ಯರು ತನ್ನನ್ನು ಪಾಲಕರು, ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅವಮಾನಗೊಳಿಸಿದರು ಎಂಬ ಕಾರಣಕ್ಕೆ ಮನನೊಂದು ಆದಿತ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬುಧವಾರ ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!