ನಾನು ಯಾವುದೇ ತಪ್ಪು ಮಾಡಿಲ್ಲ ಅಂತಾ ಈಗಾಗಲೇ ಹೇಳಿದ್ದೇನೆ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಈ ವೇಳೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ಅಂತಾ ಈಗಾಗಲೇ ಹೇಳಿದ್ದೇನೆ ಎಂದರು.

ನ್ಯಾಯಾಲಯದ ಬಗ್ಗೆ ನನಗೆ ತುಂಬಾ ಗೌರವ ಇದೆ. ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ. ಈ ಬಗ್ಗೆ ಕೇಳಿದರೆ ಗಾಬರಿಪಡುತ್ತೀರಿ, ನಾನು ಪಕ್ಷದ ಕೆಲಸ ಮಾಡಿದ್ದು, ನನ್ನ ಕಷ್ಟದ ಸಮಯದಲ್ಲಿ ಜನರು ಪ್ರಾರ್ಥನೆ ಮಾಡಿದ್ದಾರೆ. ಮೇಲೊಬ್ಬ ದೇವರಿದ್ದಾನೆ ಅವನೇ ಎಲ್ಲವನ್ನೂ ನೋಡಿಕೊಳ್ಳುತ್ತಾನೆ. ವಕೀಲರ ಬಳಿ ಏನೇನು ಆಗಿದೆ ಎಲ್ಲವನ್ನೂ ಚರ್ಚೆ ಮಾಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!