ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ, ಧಾರವಾಡ ಮತ್ತು ಶಿವಮೊಗ್ಗ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 9 ಕಚೇರಿ ಸಹಾಯಕ, ಡಾಟಾ ಎಂಟ್ರಿ ಆಪರೇಟರ್ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ, ಪದವಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/- ರಿಂದ 19,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಡಿಸೆಂಬರ್ 8,2023ರೊಳಗೆ ಅರ್ಜಿ ಸಲ್ಲಿಸಬಹುದು.