ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ. ಪಾಟೀಲ

ದಿಗಂತ ವರದಿ ವಿಜಯಪುರ:

ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ‌ ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೀನ ಕೆಲಸ ಆಗಿದೆ. ಲಿಂಗ ಪತ್ತೆ ಮಾಡುವುದು ಅಪರಾಧ. ಹೀಗಾಗಿ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಂಥವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಗಂಡು, ಹೆಣ್ಣು ಮಧ್ಯೆ ತಾರತಮ್ಯ ಇರಬಾರದು. ಹೆಣ್ಣು ಲಕ್ಷ್ಮಿ ಇದ್ದಂಗೆ, ಗಂಡು ಮಕ್ಕಳಕ್ಕಿಂತ ಹೆಣ್ಣು ಮಕ್ಕಳು ಒಳ್ಳೆಯದು. ಕೊನೆಯ ಕಾಲದಲ್ಲಿ ಹೆಣ್ಣು ಮಕ್ಕಳು ನೋಡಿಕೊಳ್ಳುತ್ತಾರೆ ಎಂದರು.

ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಕಾಂಗ್ರೆಸ್ ಗೆಲವು ಪಕ್ಕಾ. ಆದರೂ ನಾಲ್ಕನೆ ಪ್ರಯತ್ನ ಮಾಡುತ್ತೇವೆ. ಆದರೆ, ಮೂರು ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಪಕ್ಕಾ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!