ಹೊಸದಿಗಂತ ವರದಿ ಬೆಳಗಾವಿ:
ನಗರದ ಚೆನ್ನಮ್ಮ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಅಲ್ಲಿದ್ದ ಇಂಗ್ಲಿಷ್ ಭಾಷೆಯ ಜಾಹೀರಾತು ಫಲಕಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಭಾಷೆ ಕಡೆಗಣಿಸಿದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ಗುರುವಾರ ಪ್ರತಿಭಟನೆ ನಡೆಸಿದರು.
ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು, ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಅಳವಡಿಸಿದ್ದ ಇಂಗ್ಲಿಷ್ ಭಾಷೆಯ ಜಾಹೀರಾತು ಫಲಕಗಳಿಗೆ ಮಸಿ ಬಳಿಯಲು ಮುಂದಾದಾಗ ಪೋಲೀಸರು ತಡೆದರು. ಈ ಸಂದರ್ಭದಲ್ಲಿ ಉಂಟಾದ ಗೊಂದಲ್ಲಿ ಪೊಲೀಸರ ಬಟ್ಟೆಯ ಮೇಲೂ ಮಸಿ ಬಿದ್ದ ಪ್ರಸಂಗ ನಡೆಯಿತು. ಆಗ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು. ನಂತರ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ಯಾವುದೇ ಜಾಹೀರಾತು ಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುತ್ತಿಲ್ಲ. ನಿಯಮ ಉಲ್ಲಂಘಿಸುತ್ತಿದ್ದರೂ ಪಾಲಿಕೆ ಅಧಿಕಾರಿಗಳೂ ಕ್ರಮ ಜರುಗಿಸುತ್ತಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸದಿದ್ದರೆ, ರಾಜ್ಯದಾದ್ಯಂತ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.