ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ನ್ಯಾಯಾಲಯ ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.
ಒಂದು ತಿಂಗಳ ಹಿಂದೆ ಪೂರ್ಣಗೊಂಡ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನ ಸಲ್ಲಿಸಲು ಪುರಾತತ್ವ ಸಂಸ್ಥೆಗೆ ಇದು ನಾಲ್ಕನೇ ಬಾರಿಗೆ ವಿಸ್ತರಣೆಯಾಗಿದೆ.
ಪುರಾತತ್ವ ಸರ್ವೇಕ್ಷಣಾ ಇಲಾಖೆ 21 ದಿನಗಳ ಕಾಲಾವಕಾಶ ಕೋರಿತ್ತು. ಆದ್ರೆ, ಇದನ್ನು ಮಸೀದಿ ಸಮಿತಿ ವಿರೋಧಿಸಿತ್ತು. ಸಧ್ಯ ನ್ಯಾಯಾಲಯ ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.