ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಕ್ರಮ ವಾರ ಪತ್ರಿಕೆಯು 75 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅಮೃತ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿಕ್ರಮ ವಾರಪತ್ರಿಕೆ 75 ಸಾರ್ಥಕ ಸಂವತ್ಸವರಗಳನ್ನು ದಾಟಿದೆ. ವಿಕ್ರಮ ವರ್ಷಪೂರ್ತಿ ಆಚರಿಸಿದ ಅಮೃತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಹಾಗೂ ವಿಕ್ರಮ ಅಮೃತ ಪಥ ಸ್ಮರಣಸಂಚಿಕೆ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಂದು ಸಂಜೆ 6:30ಕ್ಕೆ ಬೆಂಗಳೂರಿನ ಜಯನಗರದ ಆರ್.ವಿ. ಟೀಚರ‍್ಸ್ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದಾರೆ.