ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರಾವಾಹಿ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದ ಹಾಸ್ಯನಟ ಮಂಡ್ಯ ರಮೇಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಸೋಮವಾರ ಬೆಂಗಳೂರಿನ ಆರ್‌ಆರ್ ನಗರದ ಹೊರವಲಯದಲ್ಲಿರುವ ಕಲ್ಲು ಕ್ವಾರಿಯಲ್ಲಿ ಅರವಿಂದ್ ನಿರ್ಮಾಣದ ಹೊಸ ಧಾರಾವಾಹಿ ‘ಆಸೆ’ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಅವರು ಕಲ್ಲು ಕ್ವಾರಿಗೆ ಬಿದ್ದಿದ್ದು, ಕೈ, ಹೊಟ್ಟೆ, ಕಾಲಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರ ಗಾಯಗಳಾದ ಹಿನ್ನೆಲೆ ಅವರಿಗೆ ಶಸ್ತ್ರಚಿಕಿತ್ಸೆಯನ್ನು ನೀಡಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಗುರುವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.