ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ತನಿಖೆಗೆ ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ 15 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇಂದು ಬೆದರಿಕೆ ಇ-ಮೇಲ್ ಬಂದಿದ್ದು, ಈ ಬಗ್ಗೆ ತನಿಖೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಪೊಲೀಸ್ ಇಲಾಖೆಗೆ ಈ ಬಗ್ಗೆ ಸೂಕ್ತ ತನಿಖೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಎಲ್ಲ ಶಾಲೆಗಳಿಗೂ ಭದ್ರತೆ ನೀಡಲಾಗುವುದು, ಮೇಲ್ ಎಲ್ಲಿಂದ ಬಂತು, ಇದನ್ನು ಕಳಿಸಿದವರು ಯಾರು ಎನ್ನುವ ಬಗ್ಗೆ ಸೂಕ್ತ ತನಿಖೆಗೆ ಮುಂದಾಗಿದ್ದೇವೆ ಎಂದಿದ್ದಾರೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಇದು ಯಾರದ್ದೋ ಕಿಡಿಗೇಡಿಗಳ ಕೃತ್ಯ, ಹೆದರುವ ಅವಶ್ಯಕತೆ ಇದೆ. ನಿಮ್ಮ ರಕ್ಷಣೆಗೆ ನಮ್ಮ ಸರ್ಕಾರ ಇದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!