ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಬಿಇ, ಬಿ.ಟೆಕ್, ಬಿ.ಆರ್ಚ್, ಬಿ ಪ್ಲಾನಿಂಗ್ ಕೋರ್ಸ್‌ಗಳ ಪ್ರವೇಶಾತಿಗಾಗಿ ಜೆಇಇ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಮುಂಚೆ ನವೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಡಿಸೆಂಬರ್ 4ರೊಳಗೆ ಅರ್ಜಿ ಸಲ್ಲಿಸಬಹುದು.
2024ರ ಜನವರಿ ಸೆಷನ್ ಜೆಇಇ ಮೇನ್ಸ್ ಪರೀಕ್ಷೆಯನ್ನು 2024ರ ಜನವರಿ 24 ರಿಂದ ಫೆಬ್ರವರಿ 01ರ ನಡುವೆ ನಡೆಸಲಾಗುತ್ತದೆ. ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿ ಒಟ್ಟು 13 ಭಾಷೆಗಳಲ್ಲಿ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ.