Tuesday, December 30, 2025

ಬೆಂಗಳೂರಿನ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ವ್ಯಕ್ತಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ.

ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದ್ದು, ಅರವಿಂದ್(23) ಎಂಬುವರು ದುರ್ಮರಣ ಹೊಂದಿದ್ದಾರೆ. ದುರ್ಘಟನೆಯಲ್ಲಿ ವೆಂಕಟೇಶ್‌, ದೇವಿ, ವಿಶಾಲ್ ಎಂಬುವವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಎಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!