ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯಕ್ಕೆ ಮೈದಾನ ಸಜ್ಜಾಗಿದ್ದು,
ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ (Raipur) ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ನಾಲ್ಕು ಬದಲಾವಣೆ ಮಾಡಲಾಗಿದೆ. ಪ್ರಸಿದ್ಧ್ ಕೃಷ್ಣ ಬದಲಿಗೆ ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್ ಬದಲಿಗೆ ದೀಪಕ್ ಚಹಾರ್, ತಿಲಕ್ ವರ್ಮಾ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಬದಲಿಗೆ ಜಿತೇಶ್ ಶರ್ಮಾಗೆ ಅವಕಾಶ ಸಿಕ್ಕಿದೆ.