ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ 26ನೇ ರಾಜ್ಯಮಟ್ಟದ ಚುಂಚಾದ್ರಿ ಕ್ರೀಡೋತ್ಸವ ಸಮಾರೋಪ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮಹಾಸ್ವಾಮೀಜಿಗಳು ವಿಜೇತರಿಗೆ ಬಹುಮಾನ ನೀಡಿ ಆಶೀರ್ವದಿಸಿದರು.