ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ತೆಲಂಗಾಣದ ಇಂದಿನ ಚುನಾವಣಾ ಫಲಿತಾಂಶದ ಮೇಲೆ ದೇಶಕ್ಕೆ ದೇಶವೇ ಕಣ್ಣಿರಿಸಿದ್ದು, ಕುತೂಹಲದಿಂದ ಕಾಯುತ್ತಿದೆ. ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಪೈಪೋಟಿ ನೀಡುತ್ತಿದೆ.
ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರ ಹಣಾಹಣಿ ಇರುವ ರಾಜಸ್ಥಾನ ಈ ಬಾರಿ ಕುತೂಹಲ ಹೆಚ್ಚಿಸಿದೆ. ಅಶೋಕ್ ಗೆಹ್ಲೋಟ್ ಸಾರಥ್ಯದ ಕಾಂಗ್ರೆಸ್ ಸರ್ಕಾರ ಮತ್ತೆ ಗದ್ದುಗೆ ಹಿಡಿಯುವ ನಿರೀಕ್ಷೆ ಇಟ್ಟುಕೊಂಡಿದ್ದರೆ, 2018ರಲ್ಲಿ ಕಳೆದುಕೊಂಡಿರುವ ಅಧಿಕಾರವನ್ನು ಮತ್ತೆ ಪಡೆದುಕೊಳ್ಳುವ ವಿಶ್ವಾಸದಲ್ಲಿ ಬಿಜೆಪಿ ಇದೆ. ಎರಡೂ ಪಕ್ಷಗಳ ‘ಉಚಿತ ಕೊಡುಗೆಗಳ’ ನಡುವೆ ಇಲ್ಲಿ ಮತದಾರನ ಒಲವು ಯಾರ ಕಡೆಗಿದೆ? ಯಾರ ಕೊರಳಿಗೆ ವಿಜಯ ಮಾಲೆ ಹಾಕಲಿದ್ದಾನೆ ಎಂಬುದು ಇನ್ನೇನು ಕೆಲವೇ ಕ್ಷಣಗಳಲ್ಲಿ ಸ್ಪಷ್ಟವಾಗಲಿದೆ.