ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಶನಿವಾರ ರಾತ್ರಿ ಮುಂಬೈ ನಲ್ಲಿ ನಡೆದಿದೆ.
ಮುಂಬೈನ ಗಿರ್ಗಾಂವ್ ಚೌಪಟ್ಟಿಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿಕೆಯಲ್ಲಿ ತಿಳಿಸಿದೆ.
ತಡರಾತ್ರಿ 9.30 ರ ಸುಮಾರಿಗೆ ರಂಗ್ನೇಕರ್ ರಸ್ತೆಯಲ್ಲಿರುವ ಗೋಮತಿ ಭವನದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ಕೂಡಲೇ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಳಿಕ ಕಟ್ಟಡದಲ್ಲಿ ಎರಡು ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.