ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಪ್ರಬಲವಾಗಿ ಮುನ್ನಡೆ ಸಾಧಿಸಿದೆ.
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಒಂದೆರಡು ಸಂಖ್ಯೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಮಧ್ಯಪ್ರದೇಶದ ಒಟ್ಟು 230 ಕ್ಷೇತ್ರಗಳ ಪೈಕಿ 144 ಕ್ಷೇತ್ರಗಳಲ್ಲಿ ಬಿಜೆಪಿ, 83 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇಲ್ಲಿನ ಮ್ಯಾಜಿಕ್ ನಂಬರ್ 116 ಆಗಿದ್ದು, ಬಿಜೆಪಿ ಈಗಾಗಲೇ 144 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ರಾಜಸ್ಥಾನದಲ್ಲಿ 199 ಕ್ಷೇತ್ರಗಳ ಪೈಕಿ ಬಿಜೆಪಿ 116 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಕೇವಲ 67 ಸ್ಥಾನದಲ್ಲಿ ಮುಂದಿದೆ. ಇಲ್ಲಿನ ಮ್ಯಾಜಿಕ್ ಸಂಖ್ಯೆ 100 ಆಗಿದ್ದು, ಈಗಾಗಲೇ ಬಿಜೆಪಿ ಮುನ್ನಡೆ ಸಾಧಿಸಿದೆ.
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಬಿಜೆಪಿ ತೀವ್ರ ಪೈಪೋಟಿಯಲ್ಲಿದೆ. ಒಟ್ಟಾರೆ 90 ಕ್ಷೇತ್ರಗಳಿದ್ದು 49 ಸ್ಥಾನ ಬಿಜೆಪಿ ಮುಂದಿದ್ದರೆ 39 ಸ್ಥಾನದಲ್ಲಿ ಕಾಂಗ್ರೆಸ್ ಮುಂದಿದೆ. ಇನ್ನೇನು ಕೆಲವೇ ಸಮಯದಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.
ತೆಲಂಗಾಣದಲ್ಲಿ 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್ ಕೇವಲ 45 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಬಿಜೆಪಿ ಮೂರರಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.